ನವದೆಹಲಿ:

ಕರ್ನಾಟಕದ ಕಾಂಗ್ರೇಸಿಗರ ನಿದ್ದೆ ಕೆಡಿಸಿರುವ ಆಪರೇಷನ್ ಕಮಲ ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳು ನಡೆಸುತ್ತಿರುವ ಬೆನ್ನಲ್ಲೇ ಇದೀಗ ಮಧ್ಯಪ್ರದೇಶಲ್ಲೂ ಕಾಂಗ್ರೆಸ್ ಸರ್ಕಾರ ಉರುಳಿಸಲು ತೆರೆಮರೆಯಲ್ಲಿ ಬಿಜೆಪಿ ಸಿದ್ಧತೆ ನಡೆಸಿದೆ ಎಂಬ ಸುದ್ಧಿ ಹರಿದಾಡುತ್ತಿವೆ.
ಮುಖ್ಯಮಂತ್ರಿಯಾದ ಕೆಲವು ದಿನಗಳಲ್ಲೇ ಕಮಲ್‌ನಾಥ್ ಗೆ ಸರ್ಕಾರ ಉರುಳುವ ಭೀತಿ ಎದುರಾಗುತ್ತಿದೆ . ಮಧ್ಯ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸಲು ಸಿದ್ಧತೆ ನಡೆಸಿದೆ ಎಂಬ ಆತಂಕ ಕಾಂಗ್ರೆಸ್ ಪಾಳಯದಲ್ಲಿ ಮಿಂಚಿನಂತೆ ಸಂಚರಿಸುತ್ತಿದ್ದು ರಾಹುಲ್ ಎರಡೂ ರಾಜ್ಯದ ಸರ್ಕಾರ ರಕ್ಷಣೆಗೆ ತಲೆಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಸರ್ಕಾರ ಉರುಳಿಸುವ ಬಿಜೆಪಿ ಯತ್ನ ಸಫಲವಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದ್ದರೂ, ಬಿಜೆಪಿ ತನ್ನ ಪಟ್ಟು ಸಡಲಿಸಲು ತಯಾರಿಲ್ಲ ಎಂಬುದು ಕಾಂಗ್ರೆಸ್ ನಾಯಕರಿಗೆ ಮನವರಿಕೆಯಾಗಿದೆ. ಇನ್ನು ಮಧ್ಯಪ್ರದೇಶದಲ್ಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಸದ್ದಿಲ್ಲದೆ ಹವಣಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
