ಭೋಪಾಲ್:
ರಾಜ್ಯ ಾಡಳಿತಾರೂಢ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಕಮಲ್ ನಾಥ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಅಂಗೀಕರಿಸಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಸಂಜೆಯ ವೇಳೆಗೆ ವಿಧಾನಸಭೆಯಲ್ಲಿ ಕಮಲ್ ನಾಥ್ ಅವರು ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ಬಂಡಾಯ ಕಾಂಗ್ರೆಸ್ ಶಾಸರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಹಿನ್ನೆಲೆಯಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದು ಸರ್ಕಾರ ಅಸ್ಥಿರವಾಗಿತ್ತು . ಹೀಗಾಗಿ ಅಲ್ಪ ಮತದ ಸರ್ಕಾರ ಮುಂನ್ನೆಡೆಸುವುದಕ್ಕಿಂತ ವಿಸರ್ಜಿಸುವುದು ಲೇಸು ಎಂದು ಕಮಲ್ ನಾಥ್ ಅವರು ವಿಶ್ವಾಸಮತಕ್ಕೂ ಮುನ್ನವೇ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.
ಕಮಲ್ ನಾಥ್ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಅವರಿಗೆ ಸೂಚಿಸಲಾಗಿದೆ ಎಂದು ರಾಜಭವನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ