ಪಟ್ನಾ
ಸಿಪಿಐ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಚೆ ಹೊಂದಿದ್ದ ದೆಹಲಿ ಜೆಎನ್‌ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಗೆ ತೀವ್ರ ನಿರಾಸೆಯಾಗಿದೆ.
ಬಿಹಾರದಲ್ಲಿ ಒಂದುಗೂಡಿರುವ ವಿರೋಧಪಕ್ಷಗಳು ಮಹಾಮೈತ್ರಿ ಕೂಟದ ಸೂತ್ರದಡಿ 40 ಕ್ಷೇತ್ರಗಳಿಗೆ ಸೀಟು ಹಂಚಿಕೆಯನ್ನು ಪ್ರಕಟಿಸಿವೆ.
ಇದರಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) 20 ಸೀಟುಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದರೆ, ಕಾಂಗ್ರೆಸ್‌ಗೆ ಕೇವಲ 9 ಸೀಟುಗಳನ್ನು ಬಿಟ್ಟುಕೊಡಲಾಗಿದೆ. ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ ಈ ಸೀಟು ಹಂಚಿಕೆ ಒಪ್ಪಂದ ಕನ್ಹಯ್ಯಾಕುಮಾರ್‌ಗೆ ಹಿನ್ನಡೆಯುಂಟುಮಾಡಿದೆ. ಕನ್ಹಯ್ಯಾ ಸ್ಪರ್ಧೆ ಕುರಿತು ಸಹಮತವಿಲ್ಲದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಅವರಿಗೆ ಟಿಕೆಟ್ ಸಿಗದಂತೆ ಆಯ್ಕೆಗಳಿಗೆ ಅಡ್ಡಿಪಡಿಸಿದ್ದಾರೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
