ನವದೆಹಲಿ:

ನಮ್ಮ ರಾಜ್ಯದ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಮಾತುಕತೆ ನಡೆಸಿದ್ದಾರೆ.
ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
