ರಾಂಚಿ:
ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆದರೂ ಇತರೆ ಪ್ರಕರಣಗಳಲ್ಲಿ ಅವರು ಆರೋಪಿಯಾಗಿರುವುದರಿಂದ ಅವರ ಜೈಲು ವಾಸ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.
ಮೇವು ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ದೋಷಿಯಾಗಿದ್ದಾರೆ. ಪ್ರಸ್ತುತ ಅವರಿಗೆ ಜಾರ್ಖಂಡ್ ಹೈಕೋರ್ಟ್ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಿದೆಯಾದರೂ, ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.