ಅಯೋಧ್ಯೆ:

ವಿವಾದದ ಕೇಂದ್ರ ಬಿಂದು ಆಗಿರುವ ಅಯೋಧ್ಯೆಯಲ್ಲಿ ನಡೆಸಲು ಯೋಚಿಸಿರುವ ಧರ್ಮಸಭೆಗೆ ಕ್ಷಣಗಣನೆ ಆರಂಭವಾಗಿದ್ದು ಇಡೀ ದೇಶದ ಗಮನ ಸೆಳೆಯುತ್ತಿದೆ. ಇಂದು ಮುಂಜಾನೆ ರಾಮಮಂದಿರಕ್ಕೆ ಭೇಟಿ ನೀಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೃಹತ್ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉದ್ಧವ್ ಠಾಕ್ರೆಯವರು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಆಗಮಿಸಿದ್ದು. ನಿನ್ನೆಯಷ್ಟೇ ಅಯೋದ್ಯೆಯ ಜೀವನದಿಯಾದ ಸರಾಯು ಬಳಿ ಪ್ರಾರ್ಥನೆ ಸಲ್ಲಿಸಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
