ವಿಜಯವಾಡ
ಕೊರೊನಾ ಸೋಂಕು ಭೀತಿಯ ಹಿನ್ನಲೆಯಲ್ಲಿ ಆಂಧ್ರಪ್ರದೇಶದಲ್ಲಿ ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಆರು ವಾರಗಳ ಕಾಲ ಮುಂದೂಡಲಾಗಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರಮೇಶ್ ಕುಮಾರ್, ಕೇಂದ್ರ ಸರ್ಕಾರ ಮಾರಕ ಕೋವಿದ್-15 ಅನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದೆ. ಅಲ್ಲದೆ, ಇದು ತೀವ್ರ ಸಾಂಕ್ರಾಮಿಕ ರೋಗ ಎಂದು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಈ ಸಂದರ್ಭದಲ್ಲಿ ಸೂಕ್ತವಲ್ಲವಾದ್ದರಿಂದ ಆರು ವಾರಗಳ ಕಾಲ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಗೆ ಮತಪತ್ರಗಳನ್ನು ಬಳಸುವುದರಿಂದ ಮತಗಟ್ಟೆಗಳಲ್ಲಿ ಜನರು ಸಾಲುಗಟ್ಟಿ ನಿಲ್ಲುವ ಸಾಧ್ಯತೆ ಇದೆ. ಅಲ್ಲದೆ, ಮತಗಟ್ಟೆಗಳು ಸಹ ಸಾರ್ವಜನಿಕ ಆರೋಗ್ಯಕ್ಕೆ ಬೆದರಿಕೆಯಾಗಿರುವುದರಿಂದ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ಆರು ವಾರವೂ ಚುನಾವಣಾ ನೀತಿ ಸಂಹಿತೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ