ಲಾಕ್ ಡೌನ್ ಶಾಶ್ವತವಲ್ಲ : ಕೇಜ್ರಿವಾಲ್

ದೆಹಲಿ

     ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದ್ದು ಸುಮಾರ 17 ಸಾವಿರಕ್ಕಿಂತ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಕಳೆದ ಎರಡು ದಿನ ಸತತವಾಗಿ ಸಾವಿರ ಜನರಿಗೆ ಕೊವಿಡ್ ಸೋಂಕು ತಗುಲಿದೆ. 390ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

      ಹೊಸ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಬೆನ್ನಲ್ಲೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿದರು. ‘ದೆಹಲಿಯಲ್ಲಿ ಸೋಂಕು ಹೆಚ್ಚುತ್ತಿದೆ ಎನ್ನುವುದು ನಾವು ಒಪ್ಪುತ್ತೇವೆ. ಆದರೆ, ನಾವು ಎಲ್ಲದಕ್ಕೂ ಸಜ್ಜಾಗಿದ್ದೇವೆ. ಲಾಕ್‌ಡೌನ್‌ ಎನ್ನುವುದು ಶಾಶ್ವತವಲ್ಲ ಎಂದು ದೆಹಲಿ ಜನರಿಗೆ ಸಂದೇಶ ರವಾನಿಸಿದ್ದಾರೆ.ಮತ್ತೊಂದೆಡೆ ಮೇ 31ಕ್ಕೆ ಲಾಕ್‌ಡೌನ್‌ 4.0 ಅಂತ್ಯವಾಗಲಿದೆ. ಜೂನ್ 1ರ ನಂತರ ಲಾಕ್‌ಡೌನ್‌ 5.0 ಜಾರಿಯಾಗುವ ಸಾಧ್ಯತೆ ಇದೆ. ಈ ನಡುವೆ ದೆಹಲಿ ಸಿಎಂ ಮಾತುಗಳು ಚರ್ಚೆಗೆ ಕಾರಣವಾಗಿದೆ.  

     ”ದೆಹಲಿಯಲ್ಲಿ ಕೊರೊನಾ ವೈರಸ್ ಕೇಸ್‌ಗಳ ಸಂಖ್ಯೆ ಅಧಿಕವಾಗುತ್ತಿದೆ ಎನ್ನುವುದನ್ನು ನಾವು ಒಪ್ಪುತ್ತೇವೆ. ಆದರೆ, ಆ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ನಾವು ಸಂಪೂರ್ಣವಾಗಿ ಸಿದ್ಧವಾಗಿದ್ದೇವೆ. ನಾವು ಶಾಶ್ವತವಾಗಿ ಲಾಕ್‌ಡೌನ್‌ನಲ್ಲಿ ಉಳಿಯಲು ಸಾಧ್ಯವಿಲ್ಲ” ಎಂದು ದೆಹಲಿ ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.ಇತರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ದೆಹಲಿಯಲ್ಲಿ ಪರಿಸ್ಥಿತಿ ಸ್ವಲ್ಪ ಗಂಭೀರವಾಗಿದೆ ಎಂದು ಅಂಕಿ ಅಂಶ ಹೇಳುತ್ತಿದೆ. ಆದರೆ ದೆಹಲಿ ಸಿಎಂ ಮಾತ್ರ ಆತಂಕಕ್ಕೆ ಒಳಗಾಗದೆ ಜನರಿಗೆ ಧೈರ್ಯ ತುಂಬುತ್ತಿದ್ದಾರೆ. ”ಇದು ಕಳವಳಕಾರಿ ವಿಷಯ ಹೌದು, ಆದರೆ ಹೆದರುವ ಅಗತ್ಯವಿಲ್ಲ. ನಿಮ್ಮ ಸರ್ಕಾರವು ಕೊರೊನಾ ವೈರಸ್‌ಗಿಂತ ನಾಲ್ಕು ಹೆಜ್ಜೆ ಮುಂದಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ” ದೆಹಲಿ ಮುಖ್ಯಮಂತ್ರಿ ಜನರಿಗೆ ಸಮಾಧಾನಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link