ಏಪ್ರಿಲ್- ಮೇನಲ್ಲಿ ಲೋಕಸಭಾ ಚುನಾವಣೆ ಸಂಭವ

ದೆಹಲಿ

         ಏಪ್ರಿಲ್, ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಯಿದ್ದು,ಈ ಕುರಿತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ. ಲೋಕಸಭಾ ಚುನಾವಣೆ ಜೊತೆಗೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿದೆ ಎಂದು ಮಾಹಿತಿ ನೀಡಿ,ಚುನಾವಣೆಗೆ ತಯಾರಿ ಆರಂಭಿಸಬಹುದು ಎಂದು ರಾಜ್ಯಗಳಿಗೆ ಸೂಚನೆಯನ್ನು ಆಯೋಗ ರವಾನಿಸಿದೆ.

         ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮತದಾನದ ವೇಳೆ ಭದ್ರತಾ ಪಡೆಗಳ ಅವಶ್ಯಕತೆ ಲಭ್ಯತೆ ಕ್ಷೇತ್ರಗಳನ್ನು ಅವಲಂಬಿಸಿರುತ್ತದೆ. ಚುನಾವಣೆಗೆ ನೇರವಾಗಿ ಭಾಗಿಯಾಗುವ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರಗಳು ಈ ಕೂಡಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದೆ.

        16 ನೇ ಲೋಕಸಭೆ ಅವಧಿ ಜೂನ್ 3 ರಂದು ಅವಧಿ ಮುಕ್ತಾಯವಾಗಲಿದ್ದು ವಿಧಾನ ಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ನೇರವಾಗಿ ಭಾಗವಹಿಸುವ ಅಧಿಕಾರಿಗಳಿಗೆ ದೀರ್ಘಕಾಲದ ಸೇವೆ ಸಲ್ಲಿಸಿದ ಸ್ಥಳದಿಂದ ಬದಲಾವಣೆ ಮಾಡುವಂತೆ ಸೂಚಿಸಿದೆ. ಸ್ವಂತ ಊರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಅಥವಾ ಒಂದೇ ಸ್ಥಳದಲ್ಲಿ 3 ವರ್ಷ ಕರ್ತವ್ಯವನ್ನು ಪೂರ್ಣಗೊಳಿಸಿದ್ದರೆ ಅಂತಹ ಅಧಿಕಾರಿಗಳನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ನಿರ್ದೇಶಿಸಿದೆ.ಚುನಾವಣಾಧಿಕಾರಿಗಳು ಅದರಲ್ಲೂ ಡಿಇಒ/ಆರ್ ಒ/ಎಆರ್ ಓ/ ಹಾಗು ಪೆÇಲೀಸ್ ಅಧಿಕಾರಿಗಳು ಈ ಹಿಂದೆ ಚುನಾವಣೆ ಮತ್ತು ಉಪ ಚುನಾವಣೆ ನಡೆದ ಕ್ಷೇತ್ರಗಳಿಂದ ಬೇರೆಡೆಗೆ ವರ್ಗಾಯಿಸಬೇಕೆಂದಿದೆ.

       15ನೇ ಲೋಕಸಭಾ ಚುನಾವಣೆಗೆ ಮಾರ್ಚ್ 5 ರಂದು ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. 9 ಹಂತದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿತ್ತು. ಮೊದಲ ಹಂತದ ಮತದಾನ ಏಪ್ರಿಲ್ 7 ರಂದು ನಡೆದಿದ್ದರೆ, ಕೊನೆಯ ಹಂತದ ಚುನಾವಣೆ ಮೇ 12 ರಂದು ನಡೆದಿತ್ತು.

Recent Articles

spot_img

Related Stories

Share via
Copy link
Powered by Social Snap