ಎಲ್‍ಪಿಜಿ ಸಿಲಿಂಡರ್ ಸಬ್ಸಿಡಿ ಸ್ಥಗಿತ…!

ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ನೇರ ಡಿಬಿಟಿ ಪಾವತಿ ಇಲ್ಲ

ನವದೆಹಲಿ

     ಎಲ್‍ಪಿಜಿ ಸಿಲಿಂಡರ್‍ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿ ಹಣ ಕ್ರಮೇಣ ಸ್ಥಗಿತಗೊಳ್ಳುತ್ತಾ ಬಂದಿದ್ದು, ಇದೀಗ ಈ ವ್ಯವಸ್ಥೆಗೆ ತಿಲಾಂಜಲಿ ನೀಡಲಾಗಿದೆ. ಇದರಿಂದಾಗಿ ಇನ್ನು ಮುಂದೆ ಯಾರೇ ಆಗಲಿ ಸಿಲಿಂಡರ್ ಪಡೆದರೆ ಏಕ ರೂಪದ ಬೆಲೆ ಪಾವತಿಸಬೇಕು.

     ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಜಾಗತಿಕ ತೈಲ ಬೆಲೆಗಳ ಕುಸಿತ ಮತ್ತು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಕೆ ಆಗುತ್ತಿರುವುದರಿಂದ ದೇಶೀಯ ಅಡುಗೆ ಅನಿಲಕ್ಕೆ ನೀಡುವ ಸಬ್ಸಿಡಿಯನ್ನು ಸ್ಥಗಿತಗೊಳಿಸಿದೆ.

    ಇನ್ನು ಮುಂದೆ ನಾನ್ ಸಬ್ಸಿಡಿ ಮತ್ತು ಸಬ್ಸಿಡಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಯಾರೇ ಸಿಲಿಂಡರ್ ಪಡೆಯಬೇಕೆಂದರೂ ಏಕರೂಪದ ಬೆಲೆ ಪಾವತಿಸಬೇಕು.

    ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಪ್ರತಿ 14.2ಕೆಜಿ ತೂಕದ ಸಿಲಿಂಡರ್ಗೆ 594 ರೂಪಾಯಿ ನಿಗದಿಪಡಿಸಲಾಗಿದೆ. ಅಂದರೆ, ಗ್ಯಾಸ್ ಸಿಲಿಂಡರ್ಗಳಿಗೆ ಸರ್ಕಾರವು ಇನ್ನು ಮುಂದೆ ನೇರ ಲಾಭ ವರ್ಗಾವಣೆ ಯೋಜನೆ (ಡಿಬಿಟಿ) ಅಡಿ ಸಬ್ಸಿಡಿಯನ್ನು ಫಲಾನುಭವಿಗಳ ಖಾತೆಗೆ ಪಾವತಿಸುವುದಿಲ್ಲ.

    ವಾಸ್ತವವಾಗಿ, ಪ್ರಸ್ತುತ ಆರ್ಥಿಕ ವರ್ಷದ ಆರಂಭದಿಂದಲೇ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಅಡುಗೆ ಅನಿಲದ ನಡುವಿನ ಬೆಲೆಯ ಅಂತರ ಕಡಿಮೆಯಾಗುತ್ತಿತ್ತು. ಸರ್ಕಾರವು ಕಳೆದ ನಾಲ್ಕು ತಿಂಗಳುಗಳಿಂದ ಯಾವುದೇ ಫಲಾನುಭವಿಗಳ ಖಾತೆಗಳಿಗೆ ಸಬ್ಸಿಡಿ ಪಾವತಿಸಿರಲಿಲ್ಲ. ಸಬ್ಸಿಡಿ ಪಾವತಿ ಮಾಡಿಲ್ಲದಿರುವುದಕ್ಕೆ ಸರಕಾರ ಯಾವುದೇ ಕಾರಣ ತಿಳಿಸಿರಲಿಲ್ಲ. ಇದೀಗ ಗ್ಯಾಸ್ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನು ಸಂಪುರ್ಣವಾಗಿ ಸ್ಥಗಿತಗೊಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap