ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಿಧನ..!

ಪುಣೆ:

       ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. 89 ವರ್ಷದ ಶಿವಾಜಿರಾವ್ ಪಾಟೀಲ್ ಕೊರೊನಾ ವೈರಸ್‌ಗೆ ತುತ್ತಾಗಿದ್ದರು. ಆದರೆ, ಅದರಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. 

     ಕಳೆದ ತಿಂಗಳು ಮಾಜಿ ಸಿಎಂಗೆ ಕೊವಿಡ್ ತಗುಲಿತ್ತು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಕೊವಿಡ್‌ ನೆಗೆಟಿವ್ ಬಂದಿತ್ತು. ನೀಲಂಗೆಕರ್ ಅವರು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬದ ಆಪ್ತರು ಹೇಳಿದ್ದಾರೆ. ನೀಲಂಗದಲ್ಲಿ ಅವರು ಅಂತಿಮ ಸಂಸ್ಕಾರ ನಡೆಯಲಿದೆ.

      ಮರಾಠವಾಡ ಪ್ರದೇಶದ ಲಾತೂರ್‌ನ ಹಿರಿಯ ಕಾಂಗ್ರೆಸ್ ನಾಯಕರಾದ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ ಅವರು ಜೂನ್ 1985 ರಿಂದ ಮಾರ್ಚ್ 1986  ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. 1985 ರಲ್ಲಿ ಎಂಡಿ ಪರೀಕ್ಷೆಯ ಫಲಿತಾಂಶದಲ್ಲಿ ವಂಚನೆ ಆರೋಪದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ