ಮುಂಬೈ:
ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಆಹ್ವಾನ ನೀಡಿದ್ದಾರೆ.ರಾಜ್ಯದಲ್ಲಿರುವ ಏಕೈಕ ದೊಡ್ಡ ಪಕ್ಷವಾದ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರಿಗೆ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ಆಹ್ವಾನ ನೀಡಿದ್ದಾರೆಂದು ರಾಜಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟಗೊಂಡಿದ್ದು, 15 ದಿನ ಕಳೆದರೂ ಯಾವುದೇ ಪಕ್ಷ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಲಿಲ್ಲ.ಈ ಮಧ್ಯೆ ಹಾಲಿ ವಿಧಾನಸಭೆಯ ಅವಧಿ ಇಂದು ಅಂತ್ಯಗೊಂಡಿದೆ ಆದ್ದರಿಂದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ನಿನ್ನೆಯೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸ್ವಸಾಮರ್ಥ್ಯದ ಮೇಲೆ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲರು ಬಿಜೆಪಿ ಆಹ್ವಾನ ನೀಡಿದ್ದು, ಸರ್ಕಾರ ರಚನೆ ಬಳಿಕ ಬಹುಮತ ಸಾಬೀತು ಪಡಿಸಬೇಕಾಗುತ್ತದೆ.
