ಕೋಲ್ಕತಾ
2018ರ ಬೋಧ್ ಗಯಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಉಗ್ರನನ್ನು ಮುರ್ಷಿದಾಬಾದಿನಲ್ಲಿ ಶುಕ್ರವಾರದಂದು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸೂಟಿ ಎಂಬಲ್ಲಿ ಅಡಗುತಾಣದಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಕರೀಮ್ನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಈತ ಬಾಂಗ್ಲಾದೇಶ ಭಯೋತ್ಪಾದಕ ಸಂಘಟನೆ ಜಮಾತ್-ಉಲ್ ಮುಜಾಹಿದ್ದೀನ್ ಸಕ್ರಿಯ ಸದಸ್ಯನಾಗಿದ್ದಾನೆ.
ಕೋಲ್ಕತ್ತಾ ಪೊಲೀಸರ ಸ್ಪೆಷಲ್ ಟಾಸ್ಕ್ ಫೋರ್ಸ್(STF), ಮುರ್ಷಿದಾಬಾದ್ ಪೊಲೀಸರ ಜಂಟಿ ಕಾರ್ಯಾಚಾರಣೆಯಲ್ಲಿ ಈ ಉಗ್ರ ಸೆರೆಸಿಕ್ಕಿದ್ದಾನೆ. ಉಗ್ರನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.ಜಮಾತ್-ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ ಸಂಘಟನೆಯ ಪ್ರಮುಖ ಸದಸ್ಯ ಅಬ್ದುಲ್ ಕರೀಂ ಅಲಿಯಾಸ್ ಬೊರೊ ಕರೀಂಗಾಗಿ 2018ರಿಂದ ಪೊಲೀಸರು ಬಲೆ ಬೀಸಿದ್ದರು. 2018ರಲ್ಲಿ ಮುರ್ಷಿದಾಬಾದ್ ನಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ಪತ್ತೆಯಾಗಿತ್ತು, ಆದರೆ, ಕರೀಂ ತಪ್ಪಿಸಿಕೊಂಡಿದ್ದ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
