ತೆಲಂಗಾಣ:
ಇಂದು ಬೆಳ್ಳಿಗೆ ಏಕಾಏಕಿ ಮಣ್ಣಿನ ದಿಬ್ಬವೊಂದು ಕುಸಿದು 10 ಮಂದಿ ಮಹಿಳಾ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಬುಧವಾರ ತೆಲಂಗಾಣದ ನಾರಾಯಣ್ ಪೇಟ್ ನಲ್ಲಿ ವರದಿಯಾಗಿದೆ .
ನಿನ್ನೆ ಬೆಳಗ್ಗೆ ಸುಮಾರು 11 ಗಂಟೆಗೆ ತಿಲೆರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ, ಉದ್ಯೋಗ ಖಾತ್ರಿ ಯೋಜನೆಯಡಿ ದಿಬ್ಬವನ್ನು ಅಗೆಯುವ ಕಾರ್ಯದಲ್ಲಿ ನಿರತರಾಗಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣ್ಣಿನ ದಿಬ್ಬ ಕುಸಿದು ಬಿದ್ದ ತಕ್ಷಣ ಹೊರಬರಲು ಸಾಧ್ಯವಾಗದೆ 10 ಮಂದಿ ಮಹಿಳೆಯರು ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಮರಿಕಲ್ ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಅನುರಾಧಾ(30), ಭೀಮಮ್ಮ(40), ಬುಡಮ್ಣ(20), ಬಿ ಲಕ್ಷ್ಮೀ(28), ಕೆ ಲಕ್ಷ್ಮಿ(30), ಮಂಗಮ್ಮ(32), ಅನಂತಮ್ಮ(45), ಕೇಶಮ್ಮ(40), ಬಿ ಅನಂತಮ್ಮ(35) ಹಾಗೂ ಲಕ್ಷ್ಮಿ(28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ಕಾರ್ಮಿಕರು ಪಾರಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಗ್ರಾಮದ ಜನರ ಸಹಾಯದಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದ್ದಾರ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








