ತಿರುವನಂತಪುರಂ:
ಕೇರಳ ಎಂದರೆ ಶೇ.90ರಷ್ಟು ಸಾಕ್ಷರತೆ ಪ್ರಮಾಣ ಇರುವ ರಾಜ್ಯ ಎಂಬ ಖ್ಯಾತಿಗೆ ಗಳಿಸಿರುವ ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಪಾಠ ಮಾಡಲೆಂದು ನೇಮಕವಾಗಿದ್ದ ಮೌಲ್ವಿಯೊಬ್ಬ 19 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅರೋಪಿಯನ್ನು ಯುಸುಫ್ ಎಂದು ಗುರುತಿಸಲಾಗಿದ್ದು ಆರೋಪಿಯೂ ಕೊಟ್ಟಾಯಂ ಜಿಲ್ಲೆಯ ಮಸೀದಿಯೊಂದರಲ್ಲಿ ಶಿಕ್ಷಕನಾಗಿದ್ದಾನೆ . ಕಳೆದ ಎರಡು ವರ್ಷಗಳಿಂದ ಅನೇಕ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಲೇ ಬಂದಿದ್ದ ಎಂದು ತಿಳಿದು ಬಂದಿದೆ.
ಇಂತಹ ಪ್ರಕರಣಗಳಲ್ಲಿ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೆ ಏರಿಸಬೇಕು ಎಂದು ಇಸ್ಲಾಮಿಕ್ ನಿಯಮ ತಿಳಿಸುತ್ತದೆ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕನೆ ಇಂತಹ ಹೀನ ಕೃತ್ಯ ಎಸಗಿದ್ದು ಅಮಾನವೀಯ. ಆರೋಪಿಕ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅನಿಲ ಭಾರತ ಮುಸ್ಲಿಂ ಮಹಿಳೆಯರ ವೈಯಕ್ತಿಕ ಕಾನೂನು ಮಂಡಳಿ ಅಧ್ಯಕ್ಷೆ ಶೈಸ್ತಾ ಅಂಬರ್ ಹೇಳಿದ್ದಾರೆ.
ಯುಸುಫ್ ನಿರಂತರ ಪ್ರಾರ್ಥನೆ ಹಾಗೂ ಭಾಷಣದ ಮೂಲಕ ಸ್ಥಳೀಯ ಜನತೆಯ ವಿಶ್ವಾಸ ಗಳಿಸಿದ್ದ. ಅಷ್ಟೇ ಅಲ್ಲದೆ ಮಸೀದಿಯ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿ, ಪ್ರತ್ಯೇಕ ರೂಂ ಪಡೆದಿದ್ದ. ಅಲ್ಲಿಯೇ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ. ಆರೋಪಿ ಯುಸುಫ್‍ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








