ಲಖನೌ:
ಉತ್ತರ ಪ್ರದೇಶ ಮಜಿ ಮುಖ್ಯಮಂತ್ರಿ ಹಾಗು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ರಾಜಸ್ತಾನದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟು ಶಮನವಾಗದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಆಗ್ರಹಿಸಿದ್ದಾರೆ.ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ರಾಜಕೀಯ ಹಗ್ಗಾಜಗ್ಗಾಟದಲ್ಲಿ ಸರ್ಕಾರ ಇಕ್ಕಟ್ಟಿನ ಪರಿಸ್ತಿತಿಯಲ್ಲಿದೆ ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿಯ ಬಗ್ಗೆ ಚೂರು ಅವಗಾಹನೆ ಇಲ್ಲದೆ ಇರುವುದು ವಿಪರ್ಯಾಸವೇ ಸರಿ ಎಂದಿದ್ದಾರೆ.
ರಾಜ್ಯದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಅಧಿಕಾರವನ್ನು ಕುಟುಕಿದ ಮಾಯಾವತಿ ಇದು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದೆ. ಅಲ್ಲದೆ ಒಕ್ಕೂಟ ವ್ಯವಸ್ಥೆಗೆ ದ್ರೋಹವೆಸಗಲಾಗಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








