ನವದೆಹಲಿ:
ಒಂದುಕಡೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಂದೆಡೆ ಎಲ್ಲ ರಾಜಕೀಯ ಪಕ್ಷಗಳು ಗೆಲುವಿನ ರೂಪುರೇಷಗಳನ್ನು ಸಿದ್ಧಪಡಿಸುತ್ತಿವೆ. ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದ್ದು, ಲೋಕಸಭೆಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಹವಣಿಸುತ್ತಿದೆ. ಆಡಳಿತ ರೂಢ ಬಿಜೆಪಿ ಸಹ ಮತ್ತೊಮ್ಮೆ ಮೋದಿ ಪಿಎಂ ಎಂಬ ಹೇಳಿಕೆ ಮೂಲಕವೇ ಚುನಾವಣೆ ಪ್ರಚಾರಕ್ಕೆ ದೊಡ್ಡ ಮಟ್ಟದ ಸಿದ್ಧತೆ ನಡೆಸುತ್ತಿದೆ. ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ‘ಮಿಷನ್ 41’ ಎಂಬ ಹೊಸ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದ್ದಾರೆ.
ಚುನಾವಣಾ ಚಾಣಕ್ಯ ಅಮಿತ್ ಶಾ ದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದಾರೆ. ದೇಶದ ರಾಜಧಾನಿಯಲ್ಲಿ ಸಾಲು ಸಾಲು ಸಭೆಗಳನ್ನು ಅಮಿತ್ ಶಾ ಅವರು ನಡೆಸುತ್ತಿದ್ದು, ಎಲ್ಲ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಚುನಾವಣಾ ತಯಾರಿ ಸೇರಿದಂತೆ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರತ್ತ ತಲುಪಿಸಿ ಎಂಬ ಸಂದೇಶವನ್ನು ರವಾನಿಸಿದ್ದಾರೆಂದು ತಿಲಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
