ಮಿತ್ರ ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಮಾಯಾವತಿ..!!

ಲಕ್ನೊ:
   ಕಳೆದ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮುರಿದುಕೊಂಡಿದ್ದ ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿಯವರು ಇದೀಗ ತಮ್ಮ ಮಿತ್ರ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. .
    ರಾಜಕಾರಣದಲ್ಲಿ ಧ್ರುವೀಕರಣವಾಗಬಹುದು ಎಂದು ಮುಸ್ಲಿಂ ನಾಯಕರಿಗೆ ಟಿಕೆಟ್ ನೀಡದಂತೆ ಅಖಿಲೇಶ್ ಯಾದವ್ ತಮ್ಮನ್ನು ತಡೆದರು. ಆದರೆ ನಾನು ಅವರ ಮಾತುಗಳನ್ನು ಕೇಳಲಿಲ್ಲ. ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗಿದ್ದಾಗ ಯಾದವೇತರರಿಗೆ ಮತ್ತು ದಲಿತರಿಗೆ ಅನ್ಯಾಯ ಮಾಡಿದ್ದು ಇದರಿಂದಾಗಿ ಕಳೆದ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಈ ಸಮಾಜದ ಜನರು ಮತ ನೀಡಲಿಲ್ಲ. ದಲಿತರ ಅಭಿವೃದ್ಧಿಗೆ ಕೂಡ ಎಸ್ಪಿ ಅಡ್ಡಗಾಲು ಹಾಕುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.
     ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಎಸ್ಪಿ ಟಿಕೆಟ್ ನಿಂದ ಸ್ಪರ್ಧಿಸಿ ಗೆದ್ದ ಸಂಸದರಲ್ಲಿ ಮೂವರು ಮುಸ್ಲಿಂ ನಾಯಕರಾಗಿದ್ದಾರೆ. ಮೊಹಮ್ಮದ್ ಅಜಂ ಖಾನ್, ಶಫಿಖುರ್ ರೆಹಮಾನ್ ಮತ್ತು ಎಸ್ ಟಿ ಹಸನ್.
      ಅಷ್ಟಕ್ಕೇ ಸುಮ್ಮನಾಗದ ಮಾಯಾವತಿಯವರು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ಕೂಡ ಹರಿಹಾಯ್ದಿದ್ದು ಅವರು ಬಿಜೆಪಿ ಜೊತೆ ಒಳಸಂಚು ನಡೆಸುತ್ತಿದ್ದು ತಮ್ಮನ್ನು ತಾಜ್ ಕಾರಿಡಾರ್ ಕೇಸಿನಲ್ಲಿ ಸಿಕ್ಕಿಸಿಹಾಕಲು ನೋಡುತ್ತಿದ್ದಾರೆ ಎಂದು ಆರೋಪಿಸಿದರು. 
   

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ