ಜಿನ್ ಪಿಂಗ್ ಕಂಡರೆ ಮೋದಿಗೆ ಭಯ : ರಾಹುಲ್ ಗಾಂಧಿ

0
21
ನವದೆಹಲಿ:
 
         ಜಾಗತಿಕವಾಗಿ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ನನ್ನು ಸೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಮತ್ತು ದುರ್ಬಲರಾಗಿರುವ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
         ಅತ್ತ ವಿಶ್ವಸಂಸ್ಥೆಯಲ್ಲಿ ಉಗ್ರ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ಭಾರತದ ಕಾರ್ಯಕ್ಕೆ ಚೀನಾ ಮತ್ತೆ ಅಡ್ಡಿಯಾಗಿದೆ ಮತ್ತು ಇದು ಮೋದಿಯವರ ರಾಜತಾಂತ್ರಿಕತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾಂಗ್ರೆಸ್ ಬಣ್ಣಿಸಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕ್ಸಿ ಜಿನ್ ಪಿಂಗ್ ಗೆ ಮೋದಿ ಹೆದರಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ಮೋದಿಯ ಮೇಲೆ ಟೀಕಾಸ್ತ್ರವನ್ನು ಪ್ರಯೋಗಿಸಿದ್ದಾರೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here