ನವದೆಹಲಿ
ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕಕರ ಸಂಬಳ ಏರಿಕೆ ಕುರಿತಂತೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ ಆದರೆ ಅಧಿಕೃತ ಆದೇಶ ಒಂದೇ ಬಾಕಿ ಉಳಿದಿರುವುದು. ವೇತನ ಸಂಹಿತೆಯ ಕರಡು ಪ್ರತಿಯಲ್ಲಿ ಕೆಲಸದ ಅವಧಿ ಬಗ್ಗೆ ಬದಲಾವಣೆ ಬಗ್ಗೆ ಪ್ರಸ್ತಾವ ಇದ್ದರೂ ಕನಿಷ್ಠ ವೇತನದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸಮಿತಿ ತಿಳಿಸಿದೆ.
7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ 18,000ರೂಪಾಯಿ ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಪ್ರಸ್ತಾಪವಾಗಿಲ್ಲ ಎನ್ನಲಾಗಿದೆ.
ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.
