7ನೇ ವೇತನ ಆಯೋಗ : ನೌಕರರ ವೇತನ ಹೆಚ್ಚಳಕ್ಕೆ ಪ್ರಧಾನಿ ಭರವಸೆ.!

ನವದೆಹಲಿ

   ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕಕರ ಸಂಬಳ ಏರಿಕೆ ಕುರಿತಂತೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ ಆದರೆ ಅಧಿಕೃತ ಆದೇಶ ಒಂದೇ ಬಾಕಿ ಉಳಿದಿರುವುದು. ವೇತನ ಸಂಹಿತೆಯ ಕರಡು ಪ್ರತಿಯಲ್ಲಿ ಕೆಲಸದ ಅವಧಿ ಬಗ್ಗೆ ಬದಲಾವಣೆ ಬಗ್ಗೆ ಪ್ರಸ್ತಾವ ಇದ್ದರೂ ಕನಿಷ್ಠ ವೇತನದಲ್ಲಿ  ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸಮಿತಿ ತಿಳಿಸಿದೆ.

   7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ 18,000ರೂಪಾಯಿ ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಪ್ರಸ್ತಾಪವಾಗಿಲ್ಲ ಎನ್ನಲಾಗಿದೆ.

    ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್ ನೀಡಲಾಗಿದೆ. ಡಿಎ ಜೊತೆಗೆ ಟಿಎ ಸಿಕ್ಕಿದೆ. ಆದರೆ ಕನಿಷ್ಠ ವೇತನ ಏರಿಕೆ ಮಾಡಿಲ್ಲ. 
    ತಿಂಗಳಲ್ಲಿ 26 ದಿನಗಳ ಕೆಲಸದಂತೆ ಲೆಕ್ಕಾಚಾರ ತಿಂಗಳ ವೇತನವನ್ನು ನಿಗದಿಪಡಿಸಲು  ಉತ್ಪಾದನಾ ಕಾರ್ಖಾನೆಗಳೂ ಪ್ರತಿ ದಿನ 9 ಗಂಟೆ ಅವಧಿ ಕೆಲಸ ಮಾಡುವಂತೆ ಮನವಿ ಮಾಡಿವೆ. ಸದ್ಯ ಈ ಲೆಕ್ಕಾಚಾರದಂತೆ 692 ರೂ ಪ್ರತಿ ದಿನದಂತೆ ಸಿಗಲಿದೆ. ಅದರೆ ಸರ್ಕಾರ ಈಗ ವೇತನ ಪರಿಷ್ಕರಣೆ ಮಾಡಲಿದ್ದು, ದೇಶವ್ಯಾಪಿಯಾಗಿ ಕನಿಷ್ಠ ವೇತನ ಕೂಡಾ ದೇಶವ್ಯಾಪ್ತಿ ಬದಲಾಗಲಿದೆ ಎಂದು ತಿಳಿದು ಬಂದಿದೆ.

     ರಾಷ್ಟ್ರೀಯ ಕನಿಷ್ಠ ವೇತನ ಬದಲಾವಣೆಗೆ ಸೂಚಿಸಿರುವ ಸಲಹಾ ಮಂಡಳಿಯ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆಯಾಗಲಿದೆ. ಇದನ್ನು ರಾಜ್ಯ ಸರ್ಕಾರಿ ನೌಕರರಿಗೂ ಹಂತ ಹಂತವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ. 7ನೇ ವೇತನ ಆಯೋಗದ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ, ಭತ್ಯೆ, ಕೆಲಸದ ಅವಧಿ, ರಜಾ ದಿನ ನಿಗದಿ ಮಾಡುವಂತೆ ಬೇಡಿಕೆ ಇದ್ದೆ ಇದೆ.

     ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap