ಆನ್ ಲೈನ್ ನಲ್ಲಿ ಸೆಮಿಸ್ಟರ್ ನಡೆಸಲು ಮುಂದಾದ ಮುಂಬೈ ಐಐಟಿ…!

ನವದೆಹಲಿ:

    ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮುಂಬೈ ಭಾರತೀಯ ತಂತ್ರಜ್ಞಾನ ಸಂಸ್ಥೆ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್ ನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ನಡೆಸಲು ತೀರ್ಮಾನಿಸಿದೆ . ಕೋವಿಡ್ -19 ಸಮಯದಲ್ಲಿ ನಮಗೆ ವಿದ್ಯಾರ್ಥಿಗಳ ಸುರಕ್ಷತೆಯೇ ಮುಖ್ಯವಾಗಿದೆ ಎಂದು ಐಐಟಿ ಮುಂಬೈ ನಿರ್ದೇಶಕರು ತಿಳಿಸಿದ್ದಾರೆ.

    ಭಾರತದ ಐಐಟಿಗಳಲ್ಲಿ ಮುಂಬೈ ಐಐಟಿಯೇ ಮೊದಲ ಬಾರಿಗೆ ಈ ನಿರ್ಧಾರ ತೆಗೆದುಕೊಂಡಿದ್ದು ಶಿಕ್ಷಣ ಸಂಸ್ಥೆಯ 62 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೊಸ ಶೈಕ್ಷಣಿಕ ಸೆಮಿಸ್ಟರ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಲ್ಲದೆ ಆನ್ ಲೈನ್ ನಲ್ಲಿ ನಡೆಯಲಿದೆ.

   ದೇಶದ ಇನ್ನುಳಿದ ಐಐಟಿಗಳು ಸಹ ಇದೇ ನಿರ್ಧಾರವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ನಿನ್ನೆ ನಡೆದ ಸಭೆಯಲ್ಲಿ ಮುಂದಿನ ಶೈಕ್ಷಣಿಕ ಸೆಮಿಸ್ಟರ್ ನ್ನು ಸಂಪೂರ್ಣವಾಗಿ ಆನ್ ಲೈನ್ ವಿಧಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಐಐಟಿ ನಿರ್ದೇಶಕ ಸುಭಾಷಿಸ್ ಚೌಧರಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap