ನಾಗರಿಕ ಪೌರತ್ವ ಹಕ್ಕು ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು..!

ನವದೆಹಲಿ:

     ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಮುಸ್ಲಿಮೇತರ ಅನಿವಾಸಿ ನಿರಾಶ್ರಿತರಿಗೆ ನಾಗರಿಕ ಪೌರತ್ವ ಹಕ್ಕು ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸದನದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ಕಳೆದ ಲೋಕಸಭೆಯಲ್ಲಿ ಈ ವಿವಾದಿತ ಮಸೂದೆಯನ್ನು ಮಂಡಿಸಲಾಗಿದ್ದು, ಅದಕ್ಕೆ ಅಂಗೀಕಾರ ದೊರಕಿರಲಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ವಾರ ಮತ್ತೆ ಸಂಸತ್ ನಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ ಎಂದೂ ತಿಳಿದು ಬಂದಿದೆ.

     ಈ ಮಸೂದೆಯ ಕುರಿತು ಬಿಜೆಪಿ ಸಂಸದರಿಗೆ ರಾಜನಾಥ್ ಸಿಂಗ್ ಸುಳಿವು ನೀಡಿದ್ದಾರೆ, ಈ ಮಸೂದೆಗೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ವೇಳೆ ಎಲ್ಲ ಸಂಸದರು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿಲಾಗಿದೆ ಎನ್ನಲಾಗಿದೆ. 

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ರದ್ದತಿಯಷ್ಟೆ  ಮಹತ್ವದ ಮಸೂದೆ ಇದಾಗಿದೆ ಎಂದು ರಾಜನಾಥ್ ಸಿಂಗ್ ಸೂಚ್ಯವಾಗಿ ಹೇಳಿದ್ದಾರೆ ಎಂದೂ ಉನ್ನತ ಮೂಲಗಳು ತಿಳಿಸಿವೆ.2016ರಲ್ಲಿ ಮೊದಲಿಗೆ ಸಂಸತ್ತಿನಲ್ಲಿ ಈ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು. ಅಸ್ಸಾಂ ಹಾಗೂ ಈಶಾನ್ಯ ಭಾಗದ ರಾಜ್ಯಗಳ ಜನರು ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap