ನೂತನ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ..!

ನವದೆಹಲಿ:

     ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಸೇವೆ ಅಂತ್ಯವಾದ ಹಿನ್ನೆಲೆಯಲ್ಲಿ  ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಸಂವಿಧಾನದ 324ನೇ ವಿಧಿಯ ಉಪವಿಧಿ (2) ರ ಅನ್ವಯ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.

    ರಾಜೀವ್ ಕುಮಾರ್ 1984ರ ಬ್ಯಾಚಿನ ಜಾರ್ಖಂಡ್ ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಸಾರ್ವಜನಿಕ ನೀತಿ ಮತ್ತು ಆಡಳಿತ ಕ್ಷೇತ್ರಗಳಲ್ಲಿ 30 ವರ್ಷಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap