ಸಣ್ಣ ಕೈಗಾರಿಕೆಗಳಿಗೆ ನೆರವಾಗಲು ಹೊಸ ಯೋಜನೆಗೆ ಸರ್ಕಾರ ಚಿಂತನೆ : ಗಡ್ಕರಿ

ನವದೆಹಲಿ:

     ಸಣ್ಣ ಕೈಗಾರಿಕೆಗಳಿಗೆ ಆರ್ಥಿಕವಾಗಿ ನೆರವಾಗಲು ಹೊಸ ಸಾಲ ಒದಗಿಸುವ ಸಂಸ್ಥೆಗಳ ಸ್ಥಾಪನೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ( ಎಂಎಸ್‌ಎಂಇ) ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.

     ಬ್ಯಾಂಕೇತರ ಹಣಕಾಸು ಕಂಪನಿಗಳನ್ನು (ಎನ್‌ಬಿಎಫ್‌ಸಿ) ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದ್ದು, ಎನ್‍ಬಿಎಫ್‍ಸಿಗಳು ಸಣ್ಣ ಉದ್ಯಮಗಳಿಗೆ ಸಕಾಲದಲ್ಲಿ ಸುಲಭ ಸಾಲ ನೀಡಲು ಸಹಾಯ ಮಾಡುತ್ತಿವೆ ಎಂದು ಅವರು ಹೇಳಿದ್ದಾರೆ. 

    ‘ಎಂಎಸ್ಎಂಇಗಳ ಮೇಲೆ ಕೊವಿಡ್‍ -19 ರ ಪರಿಣಾಮ ಮತ್ತು ಸವಾಲುಗಳನ್ನು ಎದುರಿಸಲು ತೆಗೆದುಕೊಂಡ ಕ್ರಮಗಳ ಕುರಿತು ಕೊಲ್ಕತಾ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ ಕೊವಿಡ್‍-19 ಸೋಂಕಿನ  ದಿನಗಳಲ್ಲಿ ಆರ್ಥಿಕ ಅಸ್ಥಿತರತೆ ಎದುರಿಸಲು ಪ್ರಯತ್ನಗಳು ಮುಂದುವರಿಸುತ್ತಲೇ ಸಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಭಾಗೀದಾರರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಬಿಕ್ಕಟ್ಟನ್ನು ಎದುರಿಸಲು ಉದ್ಯಮ ವಲಯದಲ್ಲಿ ಸಕಾರಾತ್ಮಕ ಮನೋಭಾವವನ್ನು ಕಾಪಾಡಿಕೊಳ್ಳಬೇಕಾಗಿದೆ’ ಎಂದು  ಅವರು ಹೇಳಿದ್ದಾರೆ
     ಪಿಪಿಇ ,ಮುಖವಾಡಗಳು, ಸ್ಯಾನಿಟೈಸರ್ ಬಳಕೆಯ ಬಗ್ಗೆ ಪ್ರತಿಪಾದಿಸಿದ ಅವರು, ವೈಯಕ್ತಿಕ ಬದುಕಿನಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link