ಮುಂಬೈ:
ಮಹಾರಾಷ್ಟ್ರದಲ್ಲಿ ನೂತನ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಲಿನ ವಿಧಾನ ಸಭೆಗೆ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾನಾ ಪಟೋಲೆ ಜೊತೆಗೆ ಕಣದಲ್ಲಿದ್ದ ಬಿಜೆಪಿಯ ಶಾಸಕ ಕಿಷನ್ ಎಸ್ ಕಥೋರೆ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ನಾನಾ ಪಟೋಲೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟೋಲೆ ಅವರು ವಿದರ್ಭ ಜಿಲ್ಲೆಯ ಸಕೋಳಿ ವಿಧಾನಸಭಾ ಕ್ಷೇತ್ರದವರಾಗಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣರಾಗಿದ್ದಾರೆ.
ಸ್ಪೀಕರ್ ನ್ನು ಅವಿರೋಧವಾಗಿ ಆಯ್ಕೆ ಮಾಡಬೇಕೆಂದು ಸರ್ವಪಕ್ಷ ಸಭೆ ಹಾಗೂ ಇತರ ಪಕ್ಷಗಳ ಕೋರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸದನದಲ್ಲಿ ಹೇಳಿದರು.ನಾನಾ ಪಟೋಲೆ ಕೃಷಿಕ ಕುಟುಂಬದಿಂದ ಬಂದವರಾಗಿದ್ದು, ಅವರು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುತ್ತಾರೆ ಎಂಬ ಭರವಸೆ ಹೊಂದಿರುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಭಿನಂದನಾ ಭಾಷಣ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
