ನೊಂದ ಕುಟುಂಬಗಳಿಗೆ ಸಾಂತ್ವಾನ ಹೇಳಿದ ನಿತೀಶ್ ಕುಮಾರ್…!!!

ಪಾಟ್ನಾ: 
      ಇಂದು ಬೆಳಿಗ್ಗೆ ಜಾವ ಸುಮಾರು 3.45 ಕ್ಕೆ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೀಡಾಗಿದೆ ಎಂದು ತಿಳಿದು ಬಂದಿದೆ  ಈ ದುರ್ಘಟನೆಗೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ಕೂಡ ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ ನೀಡುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ತಿಳಿಸಿದ್ದಾರೆ. 

ಹಳಿ ತಪ್ಪಿದ ರೈಲು; 7 ಜನರ ಸಾವು, ಅನೇಕರಿಗೆ ಗಾಯ

     ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ನಿತೀಶ್ ಕುಮಾರ್ ಅವರು ಬಳಿಕ ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ನೀಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ .
     ನೊಂದ ಕುಟುಂಬವರಿಗೆ ರೈಲ್ವೇ ಇಲಾಖೆ, ಸಾವನ್ನಪ್ಪಿದವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂ ಹಾಗೂ ಸಾಮಾನ್ಯ ಗಾಯಗಳಾಗಿರುವವರಿಗೆ ತಲಾ 50 ಸಾವಿರ ರೂ ನೀಡುವುದಾಗಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link