ರಾಷ್ಟ್ರೀಯ ನಾಗರೀಕ ನೋಂದಣಿ: ಅಸ್ಸಾಂ ಆಯಿತು ಮುಂದೆ ಹರಿಯಾಣ?

ನವದೆಹಲಿ:

    ಅಸ್ಸಾಮ್ ನಲ್ಲಿ ಆದ ಎನ್ ಆರ್ ಸಿ ಅವಾಂತರದ ನಂತರದಲ್ಲಿ ಈಗ ಹರಿಯಾಣದ ಸರದಿ ಆ ರಾಜ್ಯದಲ್ಲಿಯೂ ಕೂಡ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪರಿಚಯಿಸುವ ಬಗ್ಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸುಳಿವು ನೀಡಿದ್ದಾರೆ. 

    ಹರಿಯಾಣ ಮುಖ್ಯಮಂತ್ರಿಯಾಗಿ ತಮ್ಮ ಎರಡನೇ ಅವಧಿಗೆ ಆಯ್ಕೆಯಾಗಿ ಬರಲು ಬಯಸುತ್ತಿರುವ ಅವರು ಬಿಜೆಪಿಯ ರಾಷ್ಟ್ರವ್ಯಾಪಿ ಜನ ಸಂಪಾರ್ಕ್ ಕಾರ್ಯಕ್ರಮದ ಅಂಗವಾಗಿ ಮಾಜಿ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎಸ್. ಭಲ್ಲಾ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲನ್ಬಾ ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಭೇಟಿ ಮಾಡಿದಾಗ ೀ ವಿಷಯದ ಬಗ್ಗೆ ಸುಳಿವು ನೀಡಿದ್ದಾರೆ.

    ಪಂಚಕುಲದ ಅಧಿಕೃತ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ನ್ಯಾಯಮೂರ್ತಿ ಭಲ್ಲಾ ಅವರು ಹರಿಯಾಣ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರಾಗಿದ್ದರು ಮತ್ತು ಇತರ ಹುದ್ದೆಗಳನ್ನು ಅಲಂಕರಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಎನ್‌ಆರ್‌ಸಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಹರಿಯಾಣದಲ್ಲಿ ಎನ್‌ಆರ್‌ಸಿಯನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದೇನೆ ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ಅವರ ಸಹಕಾರವನ್ನು ಕೋರಿದ್ದೇವೆ . ಅವರು ಸಹ ಹರಿಯಾಣದಲ್ಲಿ ಒಂದು  ಕಾನೂನು ಆಯೋಗ ಇರಬೇಕು ಎಂದು ಸೂಚನೆ ನೀಡಿದ್ದಾರೆ. ಅವರ ಶಿಫಾರಸ್ಸನ್ನು ನಾವು ಪರಿಶೀಲಿಸುತ್ತಿದ್ದೇವೆ ಮತ್ತು ಇದರಿಂದ ಜನರಿಗೆ ಆಗುವ ಪ್ರಯೋಜನಗಳ ಕುರಿತು ವಿಶ್ಲೇಷಣೆ ನಡೆಸಿ ಮುಂದುವೆರೆಸುವ ಬಗ್ಗೆ ಮುಂಬರುವ ದಿನಗಳಲ್ಲಿ ವಿವರ ನೀಡಲಾಗುವುದು ಎಂದು ಹೇಳಿದರು.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap