ನವದೆಹಲಿ:
ಕಣಿವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗು ಜೆಎನ್ ಸಿಯ ಮುಖಂಡ ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಒಮರ್ ಅವರ ಬಂಧನ ವಾಕ್ ಸ್ವಾತಂತ್ರ್ಯ ಸೇರಿದಂತೆ ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಎಲ್ಲಾ ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ, ನಿಯಂತ್ರಿಸುವ ಹುನ್ನಾರವಾಗಿದೆ ಎಂದೂ ಅವರು ಆರೋಪಿಸಿದ್ದಾರೆ .ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರ ಒಮರ್ ಅಬ್ದುಲ್ಲಾರನ್ನು ಬಂಧಿಸಲಾಗಿತ್ತು. ಕಳೆದ ವಾರ ಪಿಎಸ್ಎ ಕಾಯ್ದೆಯನ್ವಯ ಬಂಧನದ ಅವಧಿಯನ್ನು ವಿಸ್ತರಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
