ಆರೋಪ ಮಾಡುವ ಭರದಲ್ಲಿ ಗೊಂದಲದ ಹೇಳಿಕೆ ನೀಡಿದ ರಾಹುಲ್ ಗಾಂಧಿ

ನವದೆಹಲಿ: 
      ಕಾಗ್ರೇಸ್ ನ ಅಧ್ಯಕ್ಷ ರಾಹುಲ್ ಗಾಂಧಿ ದೇಶದಲ್ಲಿ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ನಾಯಕ ಅಂತಹವರು ತಮ್ಮ ಬಾಲಿಶ ಹೇಳಿಕೆಗಳಿಂದ ಪ್ರಸಿದ್ಧಿ ಪಡೆದಷಿರುವುದು ನಿಜಕ್ಕೂ ಶೋಚನೀಯ. ದೇಶದಲ್ಲಿ ಸದ್ಯ ನಡೆಯುತ್ತಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಸನಿಹವಿರುವಾಗಲೇ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯೊಂದು ಇದೀಗ ಪಕ್ಷವನ್ನು ತೀವ್ರ ಮುಜುಗರ ಪಡುವಂತೆ ಮಾಡಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೆ ಆರೋಪ ಮಾಡುವ ಭರದಲ್ಲಿ ರಾಹುಲ್ ಆವರು ಗೊಂದಲದ ಹೇಳಿಕೆಯೊಂದನ್ನು ನೀಡಿದ್ದಾರೆ.
   
      ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸರ್ಕಾರ ಕಂಠಪೂರ್ತಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ವಿರುದ್ಧ ಸಾಕಷ್ಟು ಭ್ರಷ್ಟಾಚಾರಗಳನ್ನು ಮಾಡುತ್ತಿದೆ. ನಿನ್ನೆಯಷ್ಟೇ ನಾನು ಗೊಂದಲಕ್ಕೀಡಾಗಿದ್ದೆ. ಪನಾಮಾ ಹಗರಣದಲ್ಲಿ ಭಾಗಿಯಾಗದ ಮಧ್ಯಪ್ರದೇಶ ಮುಖ್ಯಮಂತ್ರಿಗಳು ವ್ಯಾಪಂ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಿದ್ದಾರೆ. 
     ಈ ಹಿಂದೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರು ಪನಾಮಾ ಹಗರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿಗಳ ಪುತ್ರನ ಹೆಸರಿದೆ ಎಂದು ಹೇಳಿದ್ದರು. ನವೆಂಬರ್ ತಿಂಗಳಿನಲ್ಲಿ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಈ ನಡುವಲ್ಲೇ ಕಾಂಗ್ರೆಸ್ ಅಧ್ಯಕ್ಷನ ಈ ಹೇಳಿಕೆ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಾಗುವ ಸಾಧ್ಯತೆಗಳಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap