ನವದೆಹಲಿ: 

ಬೇರೆ ಮಿತ್ರ ರಾಷ್ಟ್ರಗಳಲ್ಲಿಇರುವಂತೆ ಒಂದು ದೇಶ ಒಂದು ಚಾಲನಾ ಪರವಾನಿಗೆ ಎಂಬ ಮಹತ್ವದ ನಿರ್ಧಾರಕ್ಕೆ ಬರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಇದರಿಂದಾಗಿ ದೇಶಾದ್ಯಂತ ಏಕರೂಪದ ಚಾಲನಾ ಪರವಾನಗಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ದೇಶಾದ್ಯಂತ ಏಕರೂಪ ಚಾಲನಾ ಪರವಾನಗಿ (ಡಿಎಲ್), ವಾಹನ ನೋಂದಣಿ ಪ್ರಮಾಣ ಪತ್ರ (ಆರ್‌ಸಿ) ವಿತರಿಸಲು ಕೇಂದ್ರ ಮಹತ್ವದ ಹೆಜ್ಜೆ ಇರಿಸಿದೆ ಎಂದು ಸಾರಿಗೆ ಇಲಾಖೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
2019ರ ಜುಲೈನಿಂದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ವಿನ್ಯಾಸ, ಬಣ್ಣದ ಡಿಎಲ್ ಕಾರ್ಡ್ ವಿತರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಮುಂದಿನ ಜುಲೈನಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು(ಆರ್‌ಸಿ) ನೀಡಲು ಕೇಂದ್ರ ರಸ್ತೆ ಸರಿಗೆ ಸಚಿವಾಲಯ ಚಿಂತನೆ ನಡೆಸಿದ್ದು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಡಿಎಲ್ ಹಾಗೂ ಆರ್‌ಸಿಗಳ ಬಣ್ಣ, ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
