ನವದೆಹಲಿ:
ಸದ್ಯ ದೇಶದಲ್ಲಿ ಆಗುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ರಫ್ತು ನಿಷೇಧಿಸಿದ ಪರಿಣಾಮ ಈರುಳ್ಳಿ ದರ ಗುರುವಾರ ಕುಸಿತ ಕಂಡಿದೆ . ಏಷ್ಯಾದ ಅತಿದೊಡ್ಡ ಸಗಟು ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ಲಸಲ್ಗಾಂವ್ ನಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ರೂ.30ಕ್ಕೆ ಇಳಿಕೆಯಾಗಿದೆ.
ಸೆಪ್ಟೆಂಬರ್ ವರೆಗೂ ಪ್ರತಿ ಕೆಜಿ ಈರುಳ್ಳಿಯ ಬೆಲೆ ರೂ.51 ಇತ್ತು. ಇದೀಗ ಈರುಳ್ಳಿ ಬೆಲೆಯಲ್ಲಿ ಕುಸಿತ ಕಂಡು ಬಂದ ಹಿನ್ನಲೆಯಲ್ಲಿ ಗ್ರಾಹಕರ ಮುಖದಲ್ಲಿ ಸಂತಸ ಕಂಡು ಬಂದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇತ್ತೀಚೆಗೆ ಎದುರಾದ ಪ್ರವಾಹ ಪರಿಸ್ಥಿತಿಯಿಂದಾಗಿ ಈರುಳ್ಳಿ ಪೂರೈಕೆಯಲ್ಲಿ ಅಡಚಣೆಯುಂಟಾಗಿತ್ತು. ಆಗಸ್ಟ್ ತಿಂಗಳಿನಿಂದಲೂ ಈರುಳಅಳಿ ದರದಲ್ಲಿ ಭಾರಿ ಏರಿಕೆ ಕಂಡು ಬಂದಿತ್ತು. ಕೆಲವೆಡೆ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಂಡಿದ್ದರಿಂದ ಬೆಲೆ ಹೆಚ್ಚಳವಾಗಿದೆ ಎಂದೂ ಕೂಡ ಹೇಳಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








