ನವದೆಹಲಿ:
ಕೊರೋನಾ ಹಿನ್ನೆಲೆಯಲ್ಲಿ ಇಷ್ಟು ದಿನ ಇದ್ದ ಲಾಕ್ ಡೌನ್ ಮಂಗಳವಾರ ಕೊನೆಗೊಳ್ಳಲಿದ್ದು ಅದಕ್ಕೂ ಮುನ್ನ ಪ್ರಧಾನಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ವಿಡಿಯೊ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.
ಈ ಕುರಿತಾಗಿ ಪ್ರಧಾನಮಂತ್ರಿಯವರಿಗೆ ಸಲಹೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗು ಮಾಜಿ ವಿತ್ತ ಸಚಿವ ಪಿ ಚಿದಂಬರಂ ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ದೇಶದ ಬಡ ಕುಟುಂಬಗಳಿಗೆ ನಗದು ರೂಪದಲ್ಲಿ ಪರಿಹಾರ ನೀಡಲು ಪ್ರಧಾನಮಂತ್ರಿಯವರನ್ನು ಒತ್ತಾಯಿಸಲು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.
ಲಾಕ್ ಡೌನ್ ನಿಂದಾಗಿ ದಿನಗೂಲಿಯನ್ನೆ ನಂಬಿ ಬದುಕು ನಡೆಸುತ್ತಿದ್ದ ಬಡ ಕುಟುಂಬಗಳು ಕೆಲಸಗಳಿಲ್ಲದೆ ಬೀದಿ ಪಾಲಾಗುತ್ತಿವೆ. ಅವರ ಬಳಿ ಉಳಿತಾಯ ಹಣವಿರುವುದಿಲ್ಲ. ಉಚಿತ ಆಹಾರ ಪಡೆಯಲು ಸರದಿ ಸಾಲಿನಲ್ಲಿ ಕಾಯಬೇಕಾದ ಪರಿಸ್ಥಿತಿ ಬಂದಿದೆ. ಬಡವರಿಗೆ ಹಣ ನೀಡಿ ಅವರ ಜೀವನಕ್ಕೆ ವ್ಯವಸ್ಥೆ ಮಾಡಲು ಸರ್ಕಾರಕ್ಕೆ 65 ಸಾವಿರ ಕೋಟಿ ವೆಚ್ಚವಾಗಬಹುದು, ಅದು ಕಷ್ಟವಾಗುವುದಿಲ್ಲ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ