ನವ ದೆಹಲಿ:
ಸಂಸತ್ತಿನ ಭವನದೊಳಗೆ ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ನೀರಿನ ಬಾಟಲಿಗಳು ಮತ್ತು ಇತರ ಪ್ಲಾಸ್ಟಿಕ್ ವಸ್ತುಗಳನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸಂಸತ್ ಭವನ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯ ಮತ್ತು ಇತರ ಮಿತ್ರ ಸಂಸ್ಥೆಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿರ್ದೇಶನಗಳನ್ನು ಪಾಲಿಸುವಂತೆ ಕೋರಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಪರಿಸರ ಸ್ನೇಹಿ ಜೈವಿಕ ಮರುಬಳಕೆಯಾಗುವಂತಹ ಚೀಲಗಳು ಮತ್ತು ಇತರ ವಸ್ತುಗಳನ್ನು ಬಳಸಲು ಅವರಿಗೆ ಸೂಚಿಸಲಾಗಿದೆ ಎಂದು ಅದು ಹೇಳಿದೆ.”ಲೋಕಸಭಾ ಸಚಿವಾಲಯದ ಈ ಕ್ರಮವು ದೇಶವನ್ನು ಪ್ಲಾಸ್ಟಿಕ್‍ನಿಂದ ಮುಕ್ತಗೊಳಿಸುವ ಪ್ರಧಾನಿ ರಾಷ್ಟ್ರದ ಕರೆಗೆ ಒಂದು ಹೆಜ್ಜೆಯಾಗಿದೆ” ಎಂದು ಸಚಿವಾಲಯ ಹೇಳಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ