ಕೊಲ್ಕೋತಾ:
ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ವಿಧಿವಶರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಕಿಡ್ನಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಮಿತ್ರಾ ಅವರು ಕೊಲ್ಕೋತಾ ಆಸ್ಪತ್ರೆಗೆ ದಾಖಲಾಗಿದ್ದಾರೆ, ಜುಲೈ 30ರ ಮಧ್ಯರಾತ್ರಿ 1.30 ರ ಸಮಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.ಇನ್ನೂ ಮಿತ್ರಾ ಅವರಿಗೆ ಕೊರೋನಾ ಪರೀಕ್ಷೆ ಮಾಡಿಸಿದ್ದು ನೆಗೆಟಿವ್ ಬಂದಿದೆ, ಕಾಂಗ್ರೆಸ್ ನಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಮಿತ್ರಾ ಬಂಗಾಳದ ಸೀಲ್ದಾಹ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿದ್ದರು.