ತೆಲಂಗಾಣ:
ಖ್ಯಾತ ತೆಲುಗು ನಟ ಪವನ್ ಕಲ್ಯಾಣ್ ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಕೈಜೋಡಿಸಿದ್ದು, ಹಣಕಾಸಿನ ನೆರವಿನ ಹಸ್ತ ನೀಡಲು ಮುಂದೆ ಬಂದಿದ್ದಾರೆ.ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪವನ್ ಕಲ್ಯಾಣ್ ತಿಳಿಸಿದ್ದಾರೆ.
ಅಲ್ಲದೇ, ಇದರ ಜೊತೆಗೆ ಆಂಧ್ರಪ್ರದೇಶ್ ಹಾಗೂ ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ನೀಡುವುದಾಗಿ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಲು ನಾನು ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡಲಿದ್ದೇನೆ. ಅವರ ಅದ್ವಿತೀಯ ಹಾಗೂ ಸ್ಫೂರ್ತಿದಾಯಕ ನಾಯಕತ್ವದಿಂದ, ಖಂಡಿತ ನಮ್ಮ ದೇಶ ಕೊರೊನಾ ಸೋಂಕನ್ನು ಮೆಟ್ಟಿ ನಿಲ್ಲುತ್ತದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ