ನವದೆಹಲಿ:
ದೇಶದಲ್ಲಿ ಸದ್ಯ ತೀವ್ರವಾಗಿ ಚರ್ಚೆಗೆ ಗ್ರಾಸವಾಗಿರುವ ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆ ಮುಕ್ತಾಯವಾದ ಬೆನ್ನಲ್ಲೇ ಈ ಪ್ರಕರಣಕ್ಕೆ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ.
ಅದರಲ್ಲಿ ಪ್ರಮುಖವಾದದ್ದು ಸುನ್ನಿ ವಕ್ಫ್ ಬೋರ್ಡ್ ತನ್ನ ಅರ್ಜಿ ಹಿಂಪಡೆಯುವ ಕುರಿತು ಹೇಳಿಕೆ ನೀಡಿದ್ದು ಆದರೆ ಈ ನಿರ್ಧಾರಕ್ಕೆ ಬರುವ ಮುನ್ನ ಯಾರ ಜೊತೆಯೂ ಮಾತನಾಡದೇ ಸ್ವಂತ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಮುಸ್ಲಿಂ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್ ನಲ್ಲಿ ಮುಸ್ಲಿಂ ಅರ್ಜಿದಾರರ ಪರ ವಕಾಲತ್ತು ವಹಿಸಿಕೊಂಡಿರುವ ವಕೀಲ ಏಜಾಜ್ ಮಕ್ಬೂಲ್ ಅವರು, ಪ್ರಕರಣವನ್ನು ಹಿಂಪಡೆಯುವ ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ ತಮಗೆ ಆಘಾತ ತಂದಿದೆ ಎಂದು ಹೇಳಿದ್ದಾರೆ.’ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ನಮ್ಮ ವಿರೋಧವಿದ್ದು, ಎಲ್ಲ ಮುಸ್ಲಿಂ ಅರ್ಜಿದಾರರು ಹಿಂದೂಗಳೊಂದಿಗಿನ ಹಾಲಿ ಸಂಧಾನವನ್ನು ತಿರಸ್ಕರಿಸಿದ್ದು.
ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಂಧಾನ ಸಮಿತಿಯ ಸಂಧಾನವನ್ನು ಸುನ್ನಿ ವಕ್ಫ್ ಬೋರ್ಡ್ ಹೊರತು ಪಡಿಸಿ ಉಳಿದೆಲ್ಲಾ ಮುಸ್ಲಿಂ ಅರ್ಜಿದಾರರು ವಿರೋಧಿಸಿದ್ದಾರೆ. ಅಲ್ಲದೆ ಈ ಸಂಧಾನವನ್ನು ಒಪ್ಪಲು ನಾವು ಸಿದ್ಧರಿಲ್ಲ. ಅದು ಎಂದಿಗೂ ಸಾಧ್ಯವಿಲ್ಲ. ಇದೊಂದು ಮುಸ್ಲಿಂ ಸಮುದಾಯದ ವಿರುದ್ಧದ ಪೂರ್ವನಿರ್ಧಾರಿತ ಸಂಚಾಗಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ