ಮಹಾರಾಷ್ಟ್ರ :
ಅಕೋಲಾ ಜಿಲ್ಲೆಯ ಪ್ರಾದೇಶಿಕ ಪಕ್ಷಗಳಲ್ಲಿ ಒಂದಾದ ಪ್ರಹಾರ್ ಜನಶಕ್ತಿ ಪಕ್ಷದ ಸ್ಥಳೀಯ ಮುಖಂಡರಾದ ತುಷಾರ್ ಪುಂಡ್ಕರ್ ಅವರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಜೆಪಿಯ ಅಕೋಲಾ ಜಿಲ್ಲಾ ಘಟಕದ ಮಾಜಿ ಮುಖ್ಯಸ್ಥರಾಗಿದ್ದ ತುಷಾರ್ ಪುಂಡ್ಕರ್ ಅವರಿಗೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಗುಂಡು ಹಾರಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಅಕೋಲಾದ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು ಎಂದು ಪೊಲೀಸರು ಹೇಳಿದ್ದಾರೆ.
ಅನಂತರ ಅವರನ್ನು ಅಕೋಲಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ .ಪೊಲೀಸರು ಸ್ಥಳದಿಂದ ಬಂದೂಕು ಮತ್ತು ಎರಡು ಖಾಲಿ ಕಾಟ್ರಿìಡ್ಜ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪುಂಡ್ಕರ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಅಕೋಲಾ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹತ್ಯೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
