ಡ್ರಗ್ಸ್ ಕೇಸ್ ವಿಚಾರಣೆ ನಡೆಸಿದ ಅಧಿಕಾರಿಗೆ ಕೊರೋನಾ ಸೋಂಕು…!

ಮುಂಬೈ:

    ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಡ್ರಗ್ಸ್ ನಂಟಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಢೆ ನಡೆಸುತ್ತಿರುವ ಎನ್’ಸಿಬಿಯ ಉಪ ನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

    ಡ್ರಗ್ಸ್ ಪ್ರಕರಣ ಸಂಬಂಧ ಈ ಹಿಂತೆ ಮಲ್ಹೋತ್ರಾ ಅವರು ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಮತ್ತು ಶ್ರದ್ಧಾ ಕಪೂರ್ ಅವರನ್ನು ವಿಚಾರಣೆಗೊಳಪಡಿಸಿದ್ದರು. 

    ಸುಶಾಂತ್ ಪ್ರಕರಣದಲ್ಲಿ ಡ್ರಗ್ ನಂಟಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಎನ್‌ಸಿಬಿಯ 5 ಸದಸ್ಯರ ತಂಡವನ್ನು ದೆಹಲಿಯಿಂದ ಮುಂಬೈಗೆ ಕಳುಹಿಸಲಾಗಿದೆ. ಎನ್‌ಸಿಬಿಯ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸುಶಾಂತ್ ಪ್ರಕರಣದಲ್ಲಿ ಬಾಲಿವುಡ್ ಮತ್ತು ಡ್ರಗ್ಸ್ ಮಾಫಿಯಾ ಸಂಪರ್ಕದ ಬಗ್ಗೆ ಈ ತಂಡ ತನಿಖೆ ನಡೆಸುತ್ತಿದೆ. ಇದೀಗ ಮಲ್ಹೋತ್ರಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link