ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ನಿಧನ!!

ನವದೆಹಲಿ :

      ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ರಿಸರ್ಚ್ ಆಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

      ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಬ್ರೇನ್ ಸರ್ಜರಿ ಮಾಡಲಾಗಿತ್ತು.

      ಪ್ರಣಬ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ರಾಜಕೀಯದ ಗಣ್ಯರು ಸಂತಾಪ ಸೂಚಿಸಿದ್ದು ರಾಜಕೀಯದ ಒಂದು ಅನರ್ಗ್ಯ ರತ್ನ ಇಲ್ಲದಂತಾಅಯಿತು ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap