ಶ್ರೀಹರಿಕೋಟಾ:

ಶತ್ರು ದೇಶಗಳ ರೇಡಾರ್ ಕೇಂದ್ರಗಳನ್ನು ಪತ್ತೆ ಹಚ್ಚಬಲ್ಲ ಸಾಮರ್ಥ್ಯಹೊಂದಿರುವ ಎಮಿಸ್ಯಾಟ್ ಉಪಗ್ರಹ ಸೇರಿದಂತೆ 28 ಅನ್ಯದೇಶದ ಉಪಗ್ರಹಗಳನ್ನು ಹೊತ್ತ ಪಿ ಎಸ್ ಎಲ್ ವಿ ಸಿ-45 ರಾಕೆಟ್ ಅನ್ನು ಇಸ್ರೋ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ.
ಪಿಎಸ್ ಎಲ್ ವಿ-ಸಿ45 ಉಪಗ್ರಹ ವಾಹಕದ ಮೂಲಕ ಡಿಆರ್ ಡಿಒ ಅಭಿವೃದ್ಧಿ ಪಡಿಸಿರುವ ಎಮಿಸ್ಯಾಟ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್ ಸೆಟಲೈಟ್ ಸೇರಿದಂತೆ ಅಮೆರಿಕದ 24, ಸ್ವಿರ್ಟ್ಜರ್ ಲೆಂಡ್ ನ 01, ಸ್ಪೇನ್ 1, ಲಿಥುಯೇನಿಯಾದ 02 ಹೊತ್ತೊಯ್ದಿದ್ದು, 3 ಕಕ್ಷೆಗಳಲ್ಲಿ ಈ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ ಮತ್ತು ಪಿಎಸ್ಎಲ್ವಿ ಸಿ-45 ನಿಗದಿಯಂತೆ 9.30ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದ್ದು ವಾಹಕವು ನಿಗದಿ ಪಡಿಸಿರುವ ಗಮ್ಯದತ್ತಲ್ಲೇ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
