ಮೀರತ್:
ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಮಯದಲ್ಲಿ ಮೀರತ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಕುರಿತು ಕೋಮುವಾದಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮೊಬೈಲ್ ಫೋನ್ ನಲ್ಲಿ ಸೆರೆಯಾದ ವಿಡಿಯೋದಲ್ಲಿ, ಮೀರತ್‌ನ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸೇವೆ ಸಲ್ಲಿಸುತ್ತಿರುವ ಅಖಿಲೇಶ್ ನಾರಾಯಣ್ ಸಿಂಗ್ ಮತ್ತು ಗಲಭೆಕೋರರ ನಡುವೆ ನಡೆದ ಮಾತು ಕತೆಯ ವಿಡಿಯೋ ಸಖತ್ ವೈರಲ್ ಆಗಿದೆ. ಇತರ ಕೆಲವು ಪೊಲೀಸರು ಸಹ ಅವರೊಡನೆ ಅಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು.
ವಿಡಿಯೋಕ್ಕೆ ಪ್ರತಿಕ್ರಿಯಿಸಿದ ಮೀರತ್‌ನ ಹೆಚ್ಚುವರಿ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, “ಕಲ್ಲುಗಳನ್ನು ಹೊಡೆಯುತ್ತಾ ಭಾರತ ವಿರೋಧಿ ಪಾಕ್ ಪರ ಘೋಷಣೆಗಳನ್ನು ಅಲ್ಲಿ ಕೂಗಲಾಗುತ್ತಿತ್ತು. ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿತ್ತು.ಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಕರಪತ್ರಗಳನ್ನು ವಿತರಿಸಲಾಗುತ್ತಿತ್ತು. ಧಾರ್ಮಿಕ ಮುಖಂಡರು ಸೇರಿದಂತೆ ಎಲ್ಲರ ಮನವಿಗಳನ್ನು ತಳ್ಳಿ ಹಾಕಿ ಅಲ್ಲಿನ ಪ್ರತಿಭಟನಾಕಾರರು ಉದ್ವೇಗದಿಂದ ಕೂಡಿದ್ದರು” ಎಂದಿದ್ದಾರೆ.ಈ ಮದ್ಯೆ ಎಸ್ ಪಿ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.