ನವದೆಹಲಿ:
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಕಾಂಗ್ರೇಸ್ ನ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಬ್ಬರು ತಮ್ಮ ಕ್ಷೇತ್ರ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.
ಜನವರಿ 23 ಮತ್ತು 24 ರಂದು ಉತ್ತರ ಪ್ರದೇಶದಲ್ಲಿನ ತಮ್ಮ ಕ್ಷೇತ್ರಗಳಾದ ರಾಯ್ ಬರೇಲಿ ಹಾಗೂ ಅಮೇಥಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷ ತಿಳಿಸಿದೆ.ಎರಡು ದಿನಗಳ ಭೇಟಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥರು ಅನೇಕ ಕಾರ್ಯಕ್ರಮಗಳನ್ನು ಪಾಲ್ಗೊಳ್ಳಲಿದ್ದು, ಜಿಲ್ಲಾ ವೀಕ್ಷಕರು ಹಾಗೂ ಮೇಲ್ವಿಚಾರಣಾ ಸಮಿತಿಯೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ