ನವದೆಹಲಿ:

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಮೋದಿ ಭಾವಚಿತ್ರ ಇರುವ ಟಿಕೆಟ್ ಹಿಂಪಡೆಯಲು ರೈಲ್ವೆ ಇಲಾಖೆ ನಿರ್ಧರಿಸಿ ಆದೇಶ ನೀಡಿದೆ.
ಟಿಕೆಟ್ ಹಿಂಪಡೆಯುವ ಪ್ರಕ್ರಿಯೆ ಸದ್ಯ ಜಾರಿಯಲ್ಲಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜೆಪಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೊಗಕ್ಕೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ ಹೊರಡಿಸಿದೆ.
ಸರ್ಕಾರಿ ಯೋಜನೆಯ ಪ್ರಚಾರಕ್ಕಾಗಿ ರೈಲ್ವೆ ಟಿಕೆಟ್ ಗಳ ಮೇಲೆ ಮೋದಿ ಭಾವಚಿತ್ರವನ್ನು ಮದ್ರಿಸಲಾಗಿತ್ತು ಎಂದು ತಿಳಿಸಲಾಗಿತ್ತು . ಇದರಿಂದ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ನಿಯೋಗದ ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
