ಖರ್ಗೆ ಗೆ ರವಿಶಂಕರ್ ಪ್ರಸಾದ್ ತಿರುಗೇಟು
ನವದೆಹಲಿ:
ನರೇಂದ್ರ ಮೋದಿ ಅವರ ಆಡಳಿತವನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಗೆ ಹೋಲಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ರೀತಿಯ ಹೇಳಿಕೆ ನೀಡಿರುವುದರಿಂದ ದೇಶದ ಜನತೆಗೆ ಆಘಾತವಾಗಿದೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಳ್ವಿಕೆ ನಾಜಿ ನಾಯಕ ಹಿಟ್ಲರ್ ಮಾದರಿಯಲ್ಲಿತ್ತು ಎಂದು ಅವರು ಹೇಳುವ ಮೂಲಕ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ .
ಗಾಂಧಿ ಕುಟುಂಬಕ್ಕೆ ನಿಷ್ಠಾವಂತರಾಗಿರುವ ಖರ್ಗೆ ಅವರು ಆ ಕುಟುಂಬದ ಅನುಮತಿ ಇಲ್ಲದೆ ಒಂದು ಇಂಚೂ ಕೂಡಾ ಅಲುಗಾಡುವುದಿಲ್ಲ ಇದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಹೇಳಿದ್ದಾರೆ.ಜರ್ಮನಿಯ ನಿರಂಕುಶ ಸರ್ವಾಧಿಕಾರಿ ಹಿಟ್ಲರ್ ಮಾದರಿಯಲ್ಲಿ ನರೇಂದ್ರ ಮೋದಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು ಮತ್ತು ಆರ್ ಎಸ್ ಎಸ್ ಹಾಗೂ ಬಿಜೆಪಿ ಸಂವಿಧಾನವನ್ನು ನಾಶಪಡಿಸುತ್ತಿವೆ ಆದರೆ ಇದು ಆಗದಂತೆ ಕಾಂಗ್ರೆಸ್ ಪಕ್ಷ ನೋಡಿಕೊಳ್ಳಲಿದೆ .ದೇಶದ ಸಂವಿಧಾನ ನಿರ್ಧಿಷ್ಟ ಸಮುದಾಯದ ಜನರಿಗೆ ಮಾತ್ರ ಸಿಮೀತವಾಗಿಲ್ಲ. ಅದು ಎಲ್ಲಾ ಭಾರತೀಯರಿಗೂ ಸಂಬಂದಿಸಿದ್ದು ಎಂದು ಖರ್ಗೆ ಹೇಳಿಕೆ ನೀಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆಯಲ್ಲಿ ಪತ್ರಿಕಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯಗಳನ್ನು ಕಿತ್ತುಕೊಳ್ಳಲಾಗಿದೆ ಎಂದು ಖರ್ಗೆ ಆರೋಪಿಸಿದ್ದರು ಇದನ್ನು ಗಮನದಲ್ಲಿಟ್ಟುಕೊಂಡು ಪ್ರತಿಕ್ರಿಯಿಸಿರುವುದಾಗಿ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
