ನವದೆಹಲಿ:

ರಫೇಲ್ ಖರೀದಿ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿ ಬುಧವಾರ ಒತ್ತಾಯಿಸಿದ್ದಾರೆ .
ಡಿ.14 ರಂದು ರಫೇಲ್ ಸಂಬಂಧ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ಫ್ರಾನ್ಸ್ ನಿಂದ ಭಾರತ ಪಡೆಯಲಿರುವ 36 ರಫೇಲ್ ಜೆಟ್ ಖರೀದಿ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಜಾ ಮಾಡಿತ್ತು.
