ನವದೆಹಲಿ:
ಸಾಲು ಸಾಲು ಹಬ್ಬಗಳು ಇರುವ ಸಂದರ್ಭದಲ್ಲಿ ದೇಶದಲ್ಲಿ ಭಾರೀ ವಿದ್ವಂಸಕ ಕೃತ್ಯ ನಡೆಸಲು ಸಂಚು ನಡೆಸುತ್ತಿರುವ ಜೆ ಇ ಎಂ ಉಗ್ರ ಸಂಘಟನೆ ತನ್ನ ಅತ್ಮಾಹುತಿ ಬಾಂಬರ್‌ಗಳನ್ನು ದೆಹಲಿಗೆ ಕಳುಹಿಸಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸದ್ಯ ಹೈ ಅಲರ್ಟ್ ಆಗಿದ್ದು ನಗರದೆಲ್ಲೆಡೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಇನ್ನು ಈಗಾಗಲೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ದೆಹಲಿ ಪ್ರವೇಶಿಸಿರುವ ಉಗ್ರರು ಪಾಕಿಸ್ತಾನ ಮೂಲದ ಜೈಷ್ ಇ ಮೊಹಮ್ಮದ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಅನ್ವಯ ಪೊಲೀಸರ ವಿಶೇಷ ತಂಡಗಳು ಬುಧವಾರ ರಾತ್ರಿ ನಗರದ 9 ಸ್ಥಳಗಳಲ್ಲಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
