ಬಹರಾಂಪುರ್
ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಕೇಂದ್ರದಲ್ಲಿ ಸರ್ಕಾರ ರಚಿಸಲಿವೆ ಎಂದು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ
ಮುರ್ಶಿರಾಬಾದ್ ಜಿಲ್ಲೆಯಲ್ಲಿ ಇಂದು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಮತವನ್ನು ತೃಣಮೂಲ ಕಾಂಗ್ರೆಸ್‌ಗೆ ನೀಡಿ. ಆಗ ನಾವು ಇತರ ಪಕ್ಷಗಳೊಂದಿಗೆ ದೆಹಲಿಯಲ್ಲಿ ಮುಂದಿನ ಸರ್ಕಾರ ರಚಿಸಲು ಸಾಧ್ಯ ವಾಗುತ್ತದೆ . ನಾವು ಇತರ ಎಲ್ಲ ಪ್ರಾದೇಶಿಕ ಪಕ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ ಎಂದರು.ಬಿಜೆಪಿ ಮುಂದಿನ ಸರ್ಕಾರ ರಚಿಸುವಲ್ಲಿ ವಿಫಲವಾಗುತ್ತದೆ. ಪ್ರಾದೇಶಿಕ ಪಕ್ಷಗಳು ಪ್ರಬಲ ಮೈತ್ರಿಯೊಂದಿಗೆ ಸರ್ಕಾರ ರಚಿಸಲಿವೆ. ಬಿಜೆಪಿ ಇದನ್ನು ತಿಳಿದಿದೆ ಎಂದರು.
ನಾವು ಮಾತ್ರ ಮೋದಿ ವಿರುದ್ಧ ಧೈರ್ಯವಾಗಿ ಹೋರಾಡಿದ್ದೇವೆ. ಹೀಗಾಗಿ ಅವರು ಇಲ್ಲಿ ನಮ್ಮ ಪಕ್ಷದ ಜನರನ್ನು ವಿಚಾರಣೆ ನಡೆಸುವುದರಲ್ಲಿನ ಮಗ್ನರಾಗಿದ್ದಾರೆ ಎಂದು ಲೇವಡಿ ಮಾಡಿದರು.