ಉದ್ಯೋಗದಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ : ಸುಪ್ರೀಂ ಕೋರ್ಟ್

ನವದೆಹಲಿ

    ಸರ್ಕಾರಿ ಉದ್ಯೋಗದಲ್ಲಿ  ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ . ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕಲ್ಲ ಎಂದಿದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಯಾವ ನ್ಯಾಯಾಲಯವೂ ಆದೇಶ ನೀಡುವಂತಿಲ್ಲ ಎಂದು ತೀರ್ಪು ನೀಡಿದೆ.

   ಶುಕ್ರವಾರ ಈ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಸರ್ಕಾರಿ ಉದ್ಯೋಗಗಳಲ್ಲಿ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವ ವಿವೇಚನಾಧಿಕಾರ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳಿಗೆ ಇದೆ. ಹಾಗೆಯೇ ಅದನ್ನು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಅನುಸರಿಸಲೇ ಬೇಕು ಎಂಬ ನಿರ್ಬಂಧಗಳೇನು ಇಲ್ಲಾ ಎಂದಿದೆ.

  ಸರ್ಕಾರದ ಹುದ್ದೆಗಳಿಗೆ ನೇಮಕಾತಿ ಮಾಡುವ ಸಂದರ್ಭದಲ್ಲಿ ಹಾಗೂ ಬಡ್ತಿ ನೀಡುವಾಗ ಅಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ಅಗತ್ಯವಿದೆಯೇ ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸಬಹುದು ಎಂದು ನ್ಯಾಯಮೂರ್ತಿ ಗಳಾದ ಎಲ್. ನಾಗೇಶ್ವರ ರಾವ್ ಮತ್ತು ಹೇಮಂತ್ ಗುಪ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.

  ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಅನಿಸಿದರೆ ಈ ಸಮುದಾಯಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ ಅದು ದತ್ತಾಂಶಗಳನ್ನು ಸಂಗ್ರಹಿಸಬಹುದು. ಇಲ್ಲದಿದ್ದರೆ ಅದರ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

   ಈ ಹಿಂದೆ ನ್ಯಾಯಾಲಯವು ನೀಡಿದ್ದ ತೀರ್ಪುಗಳ ಪ್ರಕಾರ, ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ಬದ್ಧತೆ ಅಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಬಡ್ತಿಯಲ್ಲಿ ಮೀಸಲಾತಿ ಕೊಡಬೇಕು ಎನ್ನುವುದು ವ್ಯಕ್ತಿಯ ಮೂಲಭೂತ ಹಕ್ಕು ಅಲ್ಲ. ಹಾಗೆಯೇ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link