ನವದೆಹಲಿ:
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನಿಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿಯ ಇತ್ಯರ್ಥವಾಗುವವರೆಗೂ ತಮ್ಮ ವಿಚಾರಣೆಯನ್ನು ಮುಂದೂಡಿಕೆ ಮಾಡುವಂತೆ ರಿಯಾ ಇಡಿಗೆ ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದರು. ಈ ಮನವಿಯನ್ನು ಇಡಿ ಅಧಿಕಾರಿಗಳು ತಿರಸ್ಕರಿಸಿದ್ದು, ರಿಯಾ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿರುವ ರಿಯಾ ಪರ ವಕೀಲರು, ರಿಯಾ ತಮ್ಮ ಹೇಳಿಕೆ ದಾಖಲಿಸುವ ಪ್ರಕ್ರಿಯೆನ್ನು ಮುಂದೂಡಿಕೆ ಮಾಡುವಂತೆ ಕೋರಿದ್ದರು. ಸುಪ್ರೀಂ ಕೋರ್ಟ್ ನಲ್ಲಿ ಅವರ ಅರ್ಜಿ ವಿಚಾರಣೆ ಬಾಕಿ ಇದ್ದು, ಇದರ ಅತ್ಯರ್ಥವಾಗುವವರೆಗೂ ವಿಚಾರಣೆ ಮುಂದೂಡುವಂತೆ ಕೇಳಿದ್ದರು. ಆದರೆ ಇಡಿ ಅಧಿಕಾರಿಗಳು ಇದನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
